ಜಂತರ್‌ ಮಂತರ್‌ನಲ್ಲಿ ಮುಂದುವರಿದ CJP ಪ್ರತಿಭಟನೆ | ಅಭಿಜಿತ್ ದೀಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ : ವಿಡಿಯೋ ವೈರಲ್‌

Update: 2026-07-18 15:03 IST
Photo | hindustantimes

ಹೊಸದಿಲ್ಲಿ : ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ಮೇಲೆ ಮಹಿಳೆಯೊಬ್ಬರು ನೀಲಿ ಶಾಯಿ ಎರಚಿದ ಘಟನೆ ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆದಿದೆ.

ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಮುಂದುವರಿದಿದೆ. ಅಭಿಜಿತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ ಬೆನ್ನಲ್ಲೆ ಅವರ ಬೆಂಬಲಿಗರು ವೇದಿಕೆಯತ್ತ ಧಾವಿಸಿ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅಭಿಜಿತ್ ದೀಪ್ಕೆ "ನೀಲಿ ನನ್ನ ಬಣ್ಣ, ಜೈ ಭೀಮ್" ಎಂದು ಹೇಳಿದ್ದಾರೆ.

ಮಹಿಳೆಯ ಗುರುತು ಹಾಗೂ ಈ ಕೃತ್ಯದ ಹಿಂದಿನ ಉದ್ದೇಶ ತಕ್ಷಣಕ್ಕೆ ತಿಳಿದು ಬಂದಿಲ್ಲ. ಜಂತರ್‌ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಬೆಳಿಗ್ಗೆ ಪೊಲೀಸರು ದಿಲ್ಲಿಯ ಸಫ್ದರ್‌ಜಂಗ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರ ಬೆನ್ನಲ್ಲೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಅಭಿಜಿತ್‌ ದೀಪ್ಕೆ ಘೋಷಿಸಿದ್ದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News