×
Ad

ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್‌ ಪ್ಲಸ್ ಭದ್ರತೆ

Update: 2024-02-22 22:37 IST

ಮಲ್ಲಿಕಾರ್ಜುನ ಖರ್ಗೆ | Photo: PTI  

ಹೊಸದಿಲ್ಲಿ: ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಪ್ಲಸ್ ಭದ್ರತೆ ನೀಡಿದೆ.

ಒಟ್ಟು ಮೂರು ಪಾಳಿಯಲ್ಲಿ ಕೆಲಸ ಮಾಡಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ 30 ಕಮಾಂಡೊಗಳು ಖರ್ಗೆ ಅವರಿಗೆ ದೇಶಾದ್ಯಂತ ಭದ್ರತೆ ಒದಗಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇರುವ ಬೆದರಿಕೆ ಪ್ರಮಾಣವನ್ನು ಪರಿಗಣಿಸಿ ಗೃಹ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಸಾರ್ವತ್ರಿಕ ಚುನಾವಣೆ ಹಿನ್ನಲೆ ಸುರಕ್ಷತೆಯ ಅಗತ್ಯವನ್ನು ಪರಿಗಣಿಸಿ ಪ್ರಮುಖ ವಿಪಕ್ಷ ನಾಯಕನಾಗಿರುವ ಖರ್ಗೆ ಅವರಿಗೆ ಭದ್ರತೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News