×
Ad

ಶ್ರೀಘ್ರವೇ ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ: ಬಿಬಿಎಂಪಿ

Update: 2023-07-12 21:30 IST

ಬೆಂಗಳೂರು, ಜು.12: ಇಂದಿರಾ ಕ್ಯಾಂಟೀನ್‍ಗಳಲ್ಲಿ ನೀಡುವ ಆಹಾರದ ಮೆನು ಶೀಘ್ರವೇ ಬದಲಾಗಲಿದ್ದು, ದಿನನಿತ್ಯ ಬೇರೆ-ಬೇರೆ ತಿಂಡಿ-ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಇರುವಂತಹ ದುರಸ್ಥಿ ಕಾರ್ಯಗಳನ್ನು ಕೂಡಲೆ ಕೈಗೆತ್ತಿಕೊಂಡು ಸರಿಪಡಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದಿರಾ ಕ್ಯಾಂಟೀನ್‍ನಲ್ಲಿ ದುರಸ್ಥಿಯಲ್ಲಿರುವ ಬಲ್ಬ್ ಸರಿಪಡಿಸಬೇಕು, ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು. ಇರುವ ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ತೆರೆಯಲು ಕ್ಯಾಂಟೀನ್‍ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅವರು ಸೂಚನೆ ನೀಡಿದರು.

ಇದೇ ವೇಳೆ ಇಂದಿರಾ ಕ್ಯಾಂಟೀನ್ ತಪಾಸಣೆಯ ವೇಳೆ ಸಾರ್ವಜನಿಕರ ಬಳಿ ತಿಂಡಿಯ ಗುಣಮಟ್ಟ ವಿಚಾರಿಸಿದಾಗ ಪ್ರತಿನಿತ್ಯ ಅಕ್ಕಿಯಿಂದ ಮಾಡಿದಂತಹ ಆಹಾರ ಮಾತ್ರ ಲಭ್ಯವಾಗಲಿದ್ದು, ಅದನ್ನು ಬದಲಿಸಲು ಸಾರ್ವಜನಿಕರು ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News