×
Ad

ಟ್ರಾನ್ಸ್‌ಫಾರ್ಮರ್ ಅಳವಡಿಕೆ : ಬಗೆಹರಿದ ಹುಪಳಾ ಗ್ರಾಮದ ಬವಣೆ

ವಾರ್ತಾಭಾರತಿ ವರದಿ ಫಲಶ್ರುತಿ

Update: 2026-06-24 08:13 IST

ಬೀದರ್: ಭಾಲ್ಕಿ ತಾಲೂಕಿನ ಹುಪಳಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದ ಗ್ರಾಮಸ್ಥರಿಗೆ ಕೊನೆಗೂ ಪರಿಹಾರ ದೊರೆತಿದೆ. ಕಡಿಮೆ ವೋಲ್ಟೇಜ್‌ನ ಟ್ರಾನ್ಸ್‌ಫಾರ್ಮರ್ ನಿಂದಾಗಿ ಗ್ರಾಮದಲ್ಲಿ ವಿದ್ಯುತ್ ಪೂರೈಕೆ ಮತ್ತು ನೀರಿನ ಮೋ

ಟಾರ್ ಕಾರ್ಯಾಚರಣೆಯಲ್ಲಿ ಪದೇ ಪದೇ ವ್ಯತ್ಯಯ ಉಂಟಾಗುತ್ತಿತ್ತು. ಇದೇ ಕಾರಣದಿಂದ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿತ್ತು.

ಗ್ರಾಮದಲ್ಲಿ ವಿದ್ಯುತ್ ಪೂರೈಕೆ ಹಾಗೂ ನೀರಿನ ಮೋಟಾರ್‌ಗೆ ಒಂದೇ ಟ್ರಾನ್ಸ್‌ಫಾರ್ಮರ್ ಬಳಸಲಾಗುತ್ತಿತ್ತು. ಅಧಿಕ ಒತ್ತಡದಿಂದ ಆ ಟ್ರಾನ್ಸ್‌ಫಾರ್ಮರ್ ಪದೇ ಪದೇ ಸುಟ್ಟುಹೋಗುತ್ತಿದ್ದರಿಂದ ನೀರು ಸರಬರಾಜು ಸ್ಥಗಿತಗೊಳ್ಳುತ್ತಿತ್ತು. ಪರಿಣಾಮವಾಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತ್ತು.

ಈ ಕುರಿತು ವಾರ್ತಾ ಭಾರತಿ ಪತ್ರಿಕೆಯಲ್ಲಿ ಜೂ.2ರಂದು ‘ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಹುಪಳಾ ಗ್ರಾಮಸ್ಥರು: ಕೆರೆ ನೀರು ಬಳಸಿ ಚರ್ಮರೋಗಕ್ಕೆ ತುತ್ತಾಗುತ್ತಿರುವ ಜನರು’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ವರದಿ ಪ್ರಕಟವಾದ ಬಳಿಕ ಎಚ್ಚೆತ್ತ ಜೆಸ್ಕಾಂ ಅಧಿಕಾರಿಗಳು ಎರಡು ದಿನಗಳಲ್ಲಿ ಗ್ರಾಮದಲ್ಲಿ ಹೊಸ ಟ್ರಾನ್ಸ್‌ಫಾರ್ಮರ್ ಅಳವಡಿಸಿದ್ದರು. ಆದರೆ, ಅದು ಕೂಡ ಒಂದೇ ದಿನದಲ್ಲಿ ಕೆಟ್ಟು ನಿಂತಿತ್ತು.

ಇದೀಗ ಆ ಟ್ರಾನ್ಸ್‌ಫಾರ್ಮರ್ ಅನ್ನು ದುರಸ್ತಿ ಮಾಡಲಾಗಿದ್ದು, ಗ್ರಾಮದಲ್ಲಿನ ನೀರು ಹಾಗೂ ವಿದ್ಯುತ್ ಸಮಸ್ಯೆಗೆ ಕಡಿವಾಣ ಬಿದ್ದಂತಾಗಿದೆ. ವಾರ್ತಾ ಭಾರತಿ ವರದಿ ನಂತರ ಅಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಿದ್ದಕ್ಕಾಗಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಪತ್ರಿಕೆಗೆ ಧನ್ಯವಾದ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News