×
Ad

ಕಾವೇರಿ ತವರಿಗೆ ಈ ಬಾರಿ ಒಲಿಯುತ್ತಾ ಸಚಿವ ಸ್ಥಾನ?

Update: 2026-06-02 10:51 IST

ಎ.ಎಸ್.ಪೊನ್ನಣ್ಣ

ಮಡಿಕೇರಿ : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ್ಕಕೆ ರಾಜೀನಾಮೆ ನೀಡಿದ್ದು, ಡಿ.ಕೆ.ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಜೂ.3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಡಿಕೆಶಿ ಸಂಪುಟದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಶಾಸಕರು, ಸಚಿವ ಸ್ಥಾನದ ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ.

ಕೊಡಗಿನಲ್ಲಿ ಎರಡು ದಶಕಗಳ ಬಳಿಕ ಬಿಜೆಪಿ ಭದ್ರ ಕೋಟೆಯನ್ನು ಭೇದಿಸಿ ಕಾಂಗ್ರೆಸ್‌ನ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಗೆಲುವು ಸಾಧಿಸಿದ್ದರು.

ಸಿದ್ದರಾಮಯ್ಯ ಅವರ ಮೊದಲ ಸಚಿವ ಸಂಪುಟದಲ್ಲಿ ಕೊಡಗಿಗೆ ಪ್ರತಿನಿತ್ಯ ಸಿಗಬಹುದೆಂದೇ ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಬಾರಿಗೆ ಗೆಲುವು ಸಾಧಿಸಿದ ಶಾಸಕರು ಎಂಬ ಕಾರಣಕ್ಕೆ ಸಚಿವ ಸ್ಥಾನ ನೀಡಿಲ್ಲ ಎಂದು ಸಿದ್ದರಾಮಯ್ಯ ಅವರು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ನಂತರ ಎಎಸ್ ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಸಚಿವ ಸಂಪುಟ ಸ್ಥಾನಮಾನ ನೀಡಲಾಗಿತ್ತು.

ಸಂಭಾವ್ಯರ ಪಟ್ಟಿಯಲ್ಲಿ ಪೊನ್ನಣ್ಣ?: ಎ.ಎಸ್.ಪೊನ್ನಣ್ಣ ಅವರು ಕಳೆದ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರ ಸಂಕಷ್ಟದ ಸಮಯದಲ್ಲಿ ಗಟ್ಟಿಯಾಗಿ ಅವರೊಂದಿಗೆ ಬೆನ್ನುಲುಬಾಗಿ ನಿಂತು ವಿಶ್ವಾಸಗಳಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ನಡುವೆ ಅಧಿಕಾರ ಹಸ್ತಾಂತರ ಬಿಕ್ಕಟ್ಟು ಎದುರಾದಾಗ ಹೈಕಮಾಂಡ್ ನಿರ್ದೇಶದಂತೆ ಮಧ್ಯಸ್ಥಿಕೆ ವಹಿಸಿದ್ದರು. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಲು ದಿಲ್ಲಿಗೆ ತೆರಳುವ ಸಂದರ್ಭದಲ್ಲೂ ಪೊನ್ನಣ್ಣ ಜೊತೆಗಿದ್ದರು. ಅಲ್ಲದೆ, ಡಿಕೆಶಿ ಅವರೊಂದಿಗೂ ಉತ್ತಮ ಸಂಬಂಧ ಬೆಳೆಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ.

ಕೊಡಗಿಗೆ ಕೈ ತಪ್ಪುತ್ತಾ ಮಂತ್ರಿಗಿರಿ?: ಜಾತಿವಾರು ಸಮೀಕರಣ, ಪ್ರಬಲ ಜಿಲ್ಲೆಗಳ ಶಾಸಕರ ಒತ್ತಡ ಮಧ್ಯೆ ಕೊಡಗಿಗೆ ಒಂದು ವೇಳೆ ಸಚಿವ ಸ್ಥಾನ ಕೈ ತಪ್ಪಲೂಬಹದು. ಕೊಡಗಿನ ಶಾಸಕರು ಮಂತ್ರಿಯಾಗಿ ದಶಕ ಕಳೆದಿದೆ. ಪಕ್ಷಾತೀತವಾಗಿ ಕೊಡಗಿನ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕೆಂಬ ಕೂಗು ಜಿಲ್ಲೆಯ ಜನರಿಂದ ಕೇಳಿ ಬರುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಕೆ.ಎಂ.ಇಸ್ಮಾಯಿಲ್ ಕಂಡಕರೆ

contributor

Similar News