×
Ad

ದ್ವಿತೀಯ ಪಿಯುಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲಿ ಪ್ರಯಾಣ ಉಚಿತ

Update: 2024-02-21 21:14 IST

ಬೆಂಗಳೂರು : 2023-24ನೆ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಮಾ.1ರಿಂದ ಮಾ.22ರ ವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅವಕಾಶ ನೀಡಿದೆ.

2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದ್ದು, ವೋಲ್ವೋ ಎಸಿ ಬಸ್ ಹೊರತುಪಡಿಸಿ ಇತರ ಬಸ್‍ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ ಕೊಠಡಿವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News