×
Ad

ಪುತ್ತೂರು : ಕೆಎಸ್ಸಾರ್ಟಿಸಿ ಬಸ್ - ಬೈಕ್ ಢಿಕ್ಕಿ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Update: 2025-01-08 12:47 IST

ಪುತ್ತೂರು: ಬೈಕ್ ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ತೀವ್ರ ಗಾಯಗೊಂಡ ಘಟನೆ ಪುತ್ತೂರಿನ ಹೊರ ವಲಯದ ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್‌ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡ ವಿದ್ಯಾರ್ಥಿಗಳು.

ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳಿಗೆ ಹೋಗಲು ಬೈಕ್‌ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಕೆಎಸ್ಸಾರ್ಟಿಸಿ ಬಸ್‌ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಬೈಕ್ ಬಸ್ಸಿನ ಅಡಿಯಲ್ಲಿ ಹೊಕ್ಕಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News