×
Ad

ಪುತ್ತೂರು: ಹೆರಿಗೆ ವೇಳೆ ತೀವ್ರ ರಕ್ತಸ್ರಾವ; ಆಶಾ ಕಾರ್ಯಕರ್ತೆ ಸಾವು

Update: 2023-06-21 12:42 IST

ಪುತ್ತೂರು : ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ‌ ಜೂ.20 ರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.

ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.


ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತಿ, ಮೂವರು ಪುತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News