ರಾಯಚೂರಿನಲ್ಲಿ ಅಬ್ಬರದ ಮಳೆ: ಶಾಲೆಗಳಿಗೆ ರಜೆ
Update: 2025-09-11 10:54 IST
ರಾಯಚೂರು: ನಗರದ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇಂದು ಬೆಳಗ್ಗೆ ಭಾರೀ ಮಳೆಯಾಗಿದೆ. ಸುಮಾರು ಎರಡೂವರೆ ಗಂಟೆ ಕಾಲ ಸುರಿದ ಮಳೆಗೆ ಜನತೆ ತತ್ತರಿಸಿದ್ದಾರೆ.
ಮುಂಜಾವ 5 ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು (ಸೆ.11) ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತಹಶಿಲ್ದಾರರ ಆದೇಶದ ಮೇರೆಗೆ ಬಿಇಒ ರಜೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಈ ರಜಾ ಅವಧಿಯನ್ನು ಮುಂದಿನ ಎರಡು ಶನಿವಾರಗಳನ್ನು ಪೂರ್ಣಾವಧಿ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಲು ಆದೇಶಿಸಲಾಗಿದೆ ಎಂದು ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.