×
Ad

ಜನರ ವಾಸ್ತವ ಪರಿಸ್ಥಿತಿ ಅರಿಯಲು ಸಮೀಕ್ಷೆ ಮಾಡಲಾಗುತ್ತಿದೆ : ಸಚಿವ ಎನ್.ಎಸ್.ಬೋಸರಾಜು

Update: 2025-10-04 23:31 IST

ರಾಯಚೂರು : ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಸ್ವಯಂಪ್ರೇರಿತವಾಗಿ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು

ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವರ ನಿವಾಸದಲ್ಲಿ ಸಮೀಕ್ಷೆಗೆ ಬಂದ ಅಧಿಕಾರಿಗಳಿಗೆ ಸ್ವವಿವರ ನೀಡಿದರು.

ಈ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಸಮೀಕ್ಷೆಯಿಂದ ಜನರ ವಾಸ್ತವ ಪರಸ್ಥಿತಿ ತಿಳಿಯಲಿದೆ. ವಾಸ್ತವ ಪರಿಸ್ಥಿತಿಗೆ ಅನುಗುಣವಾಗಿ ಸಮೀಕ್ಷೆಯ ವರದಿಯಾಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಮಾಹಿತಿ ನೀಡಿದರು

ಈಗಾಗಲೆ ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಶೇ.50ರಷ್ಟು ಮುಕ್ತಾಯವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಗದಿಪಡಿಸಿದ ಸಮಯದೊಳಗೆ ಸಮೀಕ್ಷೆ ಮುಗಿಸಬೇಕಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News