×
Ad

ರಾಯಚೂರು ರೈಲ್ವೆ ನಿಲ್ದಾಣದ ಬಳಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

Update: 2024-11-04 10:14 IST

ರಾಯಚೂರು: ಇಲ್ಲಿನ ಕೇಂದ್ರ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಂಬರ್ 3 ಬದಿಯಲ್ಲಿ ರವಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಯಾರೋ ಸಿಗರೇಟ್ ಸೇದಿ ಬೆಂಕಿ ಕಡ್ಡಿ ಆರಿಸದೇ ಎಸೆದಿದ್ದರಿಂದ ಪ್ಲಾಟ್ ಫಾರ್ಮ್ ಬಳಿ ಒಣಗಿದ್ದ ಗಿಡಗಂಟಿಗಳಿಗೆ ಬೆಂಕಿಹೊತ್ತಿಕೊಂಡಿದೆ. ಬಳಿಕ ರೈಲ್ವೆ ನಿಲ್ದಾಣದ ಸಿಬ್ಬಂದಿ ಬೆಂಕಿಯನ್ನು ನೋಡಿ ಅಗ್ನಿಶಾಮಕದಳ ಠಾಣೆಗೆ ಕರೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆಯಿಂದ ಯಾವುದೇ ಹಾನಿಯಾಗಿಲ್ಲ. ಬೆಂಕಿ ಕಾಣಿಸಿಕೊಂಡ ಸ್ವಲ್ಪ ದೂರದಲ್ಲೇ ಡೀಸೆಲ್ ಸಂಗ್ರಹ ಟ್ಯಾಂಕ್ ಇದ್ದು ತ್ವರಿತಗತಿಯಲ್ಲಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎಂದು ರೈಲ್ವೆ ಇಲಾಖೆಯ ಸಿಬ್ಬಂದಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News