ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
Update: 2025-06-19 19:15 IST
ರಾಯಚೂರು : 2025-26ನೇ ಸಾಲಿನ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮತ್ತು ಶುಲ್ಕ ಮರುಪಾವತಿ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತಿಯುಳ್ಳ ಅರ್ಹ ವಿಧ್ಯಾರ್ಥಿಗಳು ಜೂನ್ 30ರೊಳಗೆ http://ssp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು :
ರಾಯಚೂರು-9731028420, ದೇವದುರ್ಗ-9148233616, ಲಿಂಗಸುಗೂರು-9886447863, ಮಾನವಿ-887334758 ಹಾಗೂ ಸಿಂಧನೂರು-8217621732 ಮಾಹಿತಿ ಕೇಂದ್ರದ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.