×
Ad

ಬಾಲ ಕಾರ್ಮಿಕ ಪದ್ಧತಿ ತಡೆ ಬಗ್ಗೆ ಸಿಂಧನೂರಲ್ಲಿ ಆಟೋ ಪ್ರಚಾರದ ಜನಜಾಗೃತಿ

Update: 2025-06-27 19:55 IST

ರಾಯಚೂರು : ಸಿಂಧನೂರು ತಾಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಜನಜಾಗೃತಿ ಮೂಡಿಸಲು ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಉಪಯೋಜನೆಯಡಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ಆಟೋ ಪ್ರಚಾರದ ಜನಜಾಗೃತಿ ಸಂಚಾರಿ ವಾಹನಕ್ಕೆ ಸಿಂಧನೂರಿನ ಸಿವಿಲ್ ಪ್ರಧಾನ ನ್ಯಾಯಾಧೀಶರಾದ ರೂಪ ಸಿ. ವಗ್ಗ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕಾರ ನೀಡಬೇಕು. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಮಕ್ಕಳನ್ನು ಕೆಲಸಕ್ಕೆ ಕಳುಹಿಸದೇ ಶಾಲೆಗೆ ಕಳುಹಿಸಬೇಕೆಂದು ಜನರಿಗೆ ತಿಳಿವಳಿಕೆ ಮೂಡಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಸಿಂಧನೂರಿನ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸರಸ್ವತಿ ಒಟೆಕರ್, ಸಿಂಧನೂರು ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಎನ್.ರಾಮನಗೌಡ, ವಕೀಲರಾದ ಉರುಕುಂದಪ್ಪ ಎಸ್.ಹೆಚ್.ಪಿ ಖಾದ್ರಿ, ಯು.ಬಸವಂತರಾವ್ ವಕೀಲರು, ಹನುಮಂತಪ್ಪ ಸೇರಿದಂತೆ ಕಾರ್ಮಿಕ ಇಲಾಖೆ ಸಿಬ್ಬಂದಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News