ದೇವದುರ್ಗ | ನರೇಗಾ ಕಾಮಗಾರಿ ವೇಳೆ ಬೋರ್ಡ್ ಕುಸಿದು ಮಹಿಳೆಗೆ ಗಾಯ
Update: 2026-01-24 23:03 IST
ದೇವದುರ್ಗ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾಮಗಾರಿ ನಡೆಯುತ್ತಿದ್ದ ವೇಳೆ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಮಹಿಳೆಯೊಬ್ಬರಿಗೆ ಕಾಲು ಮುರಿದಿರುವ ಘಟನೆ ದೇವದುರ್ಗ ತಾಲ್ಲೂಕಿನ ಪಲಕನಮರಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಂದಲಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಅಮರಮ್ಮ ಚೌಡಪ್ಪ ಎಂದು ಗುರುತಿಸಲಾಗಿದೆ. ನರೇಗಾ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ, ಸ್ಥಳದಲ್ಲಿದ್ದ ಸಿಮೆಂಟ್ ಬೋರ್ಡ್ ಅಚಾನಕ್‌ವಾಗಿ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಅಮರಮ್ಮ ಅವರನ್ನು ತಕ್ಷಣವೇ ಸ್ಥಳೀಯರು ಹಟ್ಟಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ರಾಯಚೂರು ಓಪೆಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.