×
Ad

ದೇವದುರ್ಗ | ಜ.17ರಂದು ತಾಲೂಕು ಮಟ್ಟದ 'ಗುರುನಮನ' ; 110 ಶಿಕ್ಷಕರಿಗೆ 'ಉತ್ತಮ ಶಿಕ್ಷಕ' ಪ್ರಶಸ್ತಿ ಪ್ರದಾನ

Update: 2026-01-16 18:58 IST

ರಾಯಚೂರು : ದೇವದುರ್ಗ ತಾಲೂಕಿನ ಹೂವಿನಹೆಡಗಿಯ ಶ್ರೀಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜ.17ರ ಶನಿವಾರದಂದು ತಾಲೂಕು ಮಟ್ಟದ 'ಗುರುನಮನ' ಮತ್ತು 'ಶಿಕ್ಷಕರ ದಿನಾಚರಣೆ' ಅಂಗವಾಗಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಒಟ್ಟು 110 ಶಿಕ್ಷಕರಿಗೆ 'ಉತ್ತಮ ಶಿಕ್ಷಕ' ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಪ್ರಶಸ್ತಿಗೆ ಬುಂಕಲದೊಡ್ಡಿ ಗ್ರಾಮಪಂಚಾಯತ್‌ ವ್ಯಾಪ್ತಿಯ ಬುಂಕಲದೊಡ್ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಶರಣಮ್ಮ ವಂದಲಿ, ನಗರಗುಂಡ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಭಾಗ್ಯಜ್ಯೋತಿ, ದೇವದುರ್ಗ ಪಟ್ಟಣದ ಕೆಇಬಿ ಶಾಲೆಯ ರೇಣುಕಾ ಮೇಟಿ, ಹೇಮನಾಳ ಪಂಚಾಯತ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೌನೇಶ ಹಿರೇಮಠ, ಸೋಮಕಾರದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರೇಣುಕಾ ಕೆ., ಬುದ್ದಿನ್ನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೆಹರುನ್ನೀಸಾ ಬೇಗಂ ಅವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ತಾಲೂಕಿನಾದ್ಯಂತ ಒಟ್ಟು 110 ಶಿಕ್ಷಕರನ್ನು ಈ ಸಮಾರಂಭದಲ್ಲಿ ಗೌರವಿಸಲಾಗುವುದು. ಸಮಾರಂಭದಲ್ಲಿ ವಿವಿಧ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News