ದೇವದುರ್ಗ | ಬೈಕ್ ಗೆ ಟ್ರ್ಯಾಕ್ಟರ್ ಢಿಕ್ಕಿ; ದಂಪತಿ ಸಾವು
Update: 2025-12-22 17:06 IST
ದೇವದುರ್ಗ: ತಾಲೂಕಿನ ನಗರಗುಂಡ ರಸ್ತೆಯಲ್ಲಿ ಬೈಕ್ ಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31) ಎಂದು ಗುರುತಿಸಲಾಗಿದೆ.
ಇಬ್ಬರು ಅರಶಿಣಗಿಯಿಂದ ದೇವದುರ್ಗಕ್ಕೆ ಬೈಕ್ ನಲ್ಲಿ ಹೊರಟಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರಗಾಯಗೊಂಡ ಪತಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.