×
Ad

ದೇವದುರ್ಗ| ಕೋಣಚಪ್ಪಳಿ ಗ್ರಾಮದಲ್ಲಿ ರಸ್ತೆ ಮೇಲೆ ಹರಿಯುತ್ತಿರುವ ಚರಂಡಿ ನೀರು; ಕ್ರಮಕ್ಕೆ ಒತ್ತಾಯ

Update: 2025-12-17 22:45 IST

ದೇವದುರ್ಗ: ದೊಂಡಂಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣಚಪ್ಪಳಿ ಗ್ರಾಮದಲ್ಲಿ ಚರಂಡಿ ಇಲ್ಲದೇ ಕೊಳಚೆ ನೀರು ರಸ್ತೆಗೆ ಹರಿಯುತ್ತಿರುವ ಕಾರಣ‌ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗದ ಭೀತಿ‌ ಎದುರಾಗಿದೆ. ಆದ್ದರಿಂದ ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಂಗನಗೌಡ ಜಿಲ್ಲಾ ಪಂಚಾಯತಿ ಸಿಇಒಗೆ ಮನವಿ ಸಲ್ಲಿಸಿದರು.

ದೇವದುರ್ಗ ತಾಲೂಕಿನ ದೊಂಡಂಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೈರ್ಮಲ್ಯ ಸಮಿತಿ ಸರಕಾರದ ಆದೇಶದಂತೆ ಕಾರ್ಯ ನಿರ್ವಹಿಸುತಿಲ್ಲ. ಕೋಣಚಪ್ಪಳಿ ಗ್ರಾಮದಲ್ಲಿ ಚರಂಡಿ ನೀರಿನಿಂದ ಅನೇಕ ರೋಗಗಳು ಬರುತ್ತಿದೆ. ಮುಖ್ಯ ರಸ್ತೆಯಲ್ಲಿ ಇರುವ ಚರಂಡಿಯ ಹೂಳು ತೆಗೆಯುವ ಕೆಲಸ ಕೂಡಲೇ ಆರಂಭಿಸಬೇಕು. ಅಕ್ಕ ಪಕ್ಕದ ಹೊಲದ ಮಾಲಕರು ಹಾಗೂ ತಕರಾರು ಮಾಡುವವರು ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನೈರ್ಮಲ್ಯ ಸಮಿತಿ ಸದಸ್ಯರು ಕಾಟಾಚಾರಕ್ಕೆ ಸಮಿತಿ ಮಾಡಿ ಜನ ಸಾಮಾನ್ಯರ ಜೊತೆ‌ ಚೆಲ್ಲಾಟವಾಡುತಿದ್ದಾರೆ. ಕೂಡಲೇ ಸಂಬಂಧಪಟ್ಟ ಸಮಿತಿಯ ಸದಸ್ಯರನ್ನು ಅಮಾನತು ಮಾಡಬೇಕು ಎಂದು ಸಂಗನಗೌಡ ಅವರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News