ದೇವದುರ್ಗ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ; ಆರೋಪಿಗಳು ಪರಾರಿ
Update: 2026-08-05 10:15 IST
ಭೂಮಾನಂದ್ ಹದ್ದಿನಾಳ್
ರಾಯಚೂರು: ಬಿಎಸ್‌ಪಿ ಪಕ್ಷದ ಕಾರ್ಯಕರ್ತ ಹಾಗೂ ದಲಿತ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ್ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಭೂಮಾನಂದ್ ಹದ್ದಿನಾಳ್ (28) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಎರಡು ಪ್ರಮುಖ ತಂಡಗಳನ್ನು ರಚಿಸಲಾಗಿದೆ.
ಮಾಹಿತಿ ತಿಳಿದು ಗಬ್ಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಸುಂಕೇಶ್ವರಹಾಳ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.