×
Ad

ಧರ್ಮಸ್ಥಳ ಪ್ರಕರಣ | ಯಾವುದೇ ಸಣ್ಣಪುಟ್ಟ ಲೋಪದೋಷಗಳಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಬರಲ್ಲ : ಸುಬುಧೇಂದ್ರ ತೀರ್ಥರು

Update: 2025-08-04 21:07 IST

ರಾಯಚೂರು : ಯಾವುದೇ ಕ್ಷೇತ್ರದ ಧಾರ್ಮಿಕ ಸ್ಥಳಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಾಗಿದ್ದಲ್ಲಿ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾಗುವುದಿಲ್ಲ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹೇಳಿದರು.

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದ ಬಗ್ಗೆ ಸೋಮವಾರ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ಪವಿತ್ರವಾದ ಕ್ಷೇತ್ರ. ಇಲ್ಲಿ ನಡೆದ ಯಾವುದೇ ಲೋಪದೋಷಗಳನ್ನು ಧಾರ್ಮಿಕ ಕ್ಷೇತ್ರಕ್ಕೆ ಜೋಡಣೆ ಮಾಡಬಾರದು. ಅಲ್ಲಿನ ವ್ಯವಸ್ಥೆ, ಕಾನೂನಿನ ಬಗ್ಗೆ ಮಾತನಾಡಬೇಕೆ ಹೊರತು, ಧರ್ಮಕ್ಷೇತ್ರದ ಬಗ್ಗೆ ಅಲ್ಲ. ಧರ್ಮಸ್ಥಳ ಕ್ಷೇತ್ರ ಪವಿತ್ರವಾದುದು. ಅತ್ಯಂತ ಭಕ್ತಿ, ಶ್ರದ್ಧಾ ಕೇಂದ್ರವಾಗಿದೆ. ಈ ಕುರಿತು ತನಿಖೆ ನಡೆಯಲಿದೆ ಎಂದರು.

ಪ್ರಕರಣ ಎಸ್ ಐ ಟಿ ತನಿಖೆ ನಡೆಯುತ್ತಿದ್ದು, ಇದರ ಬಗ್ಗೆ ನಾನು ಮಾತನಾಡುವುದು ಸೂಕ್ತವಲ್ಲ, ತನಿಖೆಯ ಬಳಿಕ ಗೊತ್ತಾಗಲಿದೆ ಎಂದು ಹೇಳಿದರು.

ಸಾರಿಗೆ ನಿಗಮಗಳ ನೌಕರರ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಅವರ ಸಮಸ್ಯೆಗಳನ್ನು ಆಲಿಸಿ ಕೂಡಲೇ ಪರಿಹಾರ ಕಲ್ಪಿಸಬೇಕು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News