×
Ad

ಧರ್ಮಸ್ಥಳ ಪ್ರಕರಣ | ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಖಚಿತ : ಸಚಿವ ಬೋಸರಾಜು

Update: 2025-08-24 17:12 IST

ರಾಯಚೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣದ ಬಗ್ಗೆ ದೂರು ಬಂದಿದ್ದರಿಂದಲೇ ಸರಕಾರ ಎಸ್‌ಐಟಿ ತನಿಖೆಗೆ ವಹಿಸಿತ್ತು. ತನಿಖೆ ಮುಗಿದ ಬಳಿಕ ವರದಿ ಸಲ್ಲಿಸಲಾಗುತ್ತದೆ. ಅದರ ಆಧಾರದ ಮೇಲೆ ಯಾರು ತಪ್ಪು ಮಾಡಿದ್ದಾರೋ ಅವರು ಕಾನೂನು ಕ್ರಮಕ್ಕೆ ಒಳಗಾಗುತ್ತಾರೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತದೇಹಗಳನ್ನು ಹೂತು ಹಾಕಿರುವ ಆರೋಪದ ಮೇಲೆ ಎಸ್‌ಐಟಿ ತನಿಖೆಗೆ ವಹಿಸಲಾಗಿತ್ತು. ಈ ನಿಟ್ಟಿನಲ್ಲಿ ಸರಕಾರ ಎಸ್‌ಐಟಿ ತನಿಖೆಗೆ ಆದೇಶಿಸಿ ಸತ್ಯಾಸತ್ಯತೆ ಪರಿಶೀಲಿಸಲು ಮುಂದಾಗಿತ್ತು. ಈಗ ತನಿಖೆ ಸ್ಥಗಿತವಾಗಿ ಸರಕಾರಕ್ಕೆ ವರದಿ ನೀಡಲಾಗುತ್ತದೆ. ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗ್ಗಡೆ ಅವರೂ ಸ್ವಾಗತಿಸಿದ್ದರು.‌ ಬಿಜೆಪಿ ನಾಯಕರು ವಿನಾಕಾರಣ ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಜನರ ಮಧ್ಯೆ ಅಶಾಂತಿ ಸೃಷ್ಠಿಸುವುದೇ ಅವರ ಕೆಲಸ. ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಲ್ಲ, ಕೇಂದ್ರ ಸರಕಾರ ರಾಜ್ಯಕ್ಕೆ ಅನುದಾನ ನೀಡುವ ಬಗ್ಗೆ, ಕೇಂದ್ರದ ಯೋಜನೆಗಳ ಬಗ್ಗೆ ಚರ್ಚಿಸುವ ಕಾಳಜಿಯಿಲ್ಲ. ಯಾರೇ ಕಾನೂನಿನಡಿ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗುತ್ತಾರೆ. ಸುಳ್ಳು ದೂರು ನೀಡಿ ಸರಕಾರದ ದಿಕ್ಕು ತಪ್ಪಿಸಲಾಗಿದೆ ಎಂದು ಹೇಳಿದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News