ರಾಯಚೂರು| ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ರಸ್ತೆ ಗುಂಡಿಗಳ ಬಗ್ಗೆ ಚರ್ಚೆ; ಶಾಸಕ ಹಾಗೂ ಸದಸ್ಯರ ನಡುವೆ ವಾಗ್ವಾದ
ರಾಯಚೂರು: ಇಲ್ಲಿ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗುಂಡಿ ಮುಚ್ಚುವ ಬಗ್ಗೆ ಬಿಜೆಪಿ ನಗರ ಶಾಸಕ ಹಾಗೂ ಪಾಲಿಕೆಯ ಸದಸ್ಯರ ನಡುವೆ ವಾಗ್ವಾದ ನಡೆಯಿತು.
ರಾಯಚೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಗರದಲ್ಲಿ ರಸ್ತೆಗುಂಡಿಗಳ ಮುಚ್ಚುವ ಕುರಿತು ಕಾಂಗ್ರೆಸ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ ಪ್ರಸ್ತಾಪಿಸಿದಾಗ ಶಾಸಕರು ರಸ್ತೆ ಗುಂಡಿ ಮುಚ್ಚಲು ಅನುದಾನ ನೀಡಿಲ್ಲ ಎಂದು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಡಾ.ಶಿವರಾಜ ಪಾಟೀಲ್‍ರು ಶಾಸಕರುಗಳಿಗೆ ರಸ್ತೆ ಗುಂಡಿ ಮುಚ್ಚಲು ಅನುದಾನ ಬರುವುದಿಲ್ಲ. ನಗರಸ್ಥಳೀಯ ಸಂಸ್ಥೆಗಳು ಹಾಗೂ ಸರ್ಕಾರದ ಅನುದಾನದಲ್ಲಿ ರಸ್ತೆ ಗುಂಡಿ ಮುಚ್ಚಬೇಕೆಂದರು.
ಹಿರಿಯ ಸದಸ್ಯ ಜಯಣ್ಣ ಮಧ್ಯಪ್ರವೇಶಿಸಿ ನಗರ ರಸ್ತೆ ಗುಂಡಿ ಮುಚ್ಚುವದು ಶಾಸಕರ ಜವಾಬ್ದಾರಿ ಎಂದಿದ್ದು ವಾಗ್ವಾದಕ್ಕೆ ಕಾರಣವಾಯಿತು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರ ಇದೆ. ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರಕ್ಕೆ ಕೇಳಿ ಅನುದಾನ ಕೊಡಲಿ. ಆದರೆ ಶಾಸಕರು ರಸ್ತೆ ಗುಂಡಿ ಮುಚ್ಚಲು ಅನುದಾನ ಬರುವುದಿಲ್ಲ. ಅನುದಾನ ಕುರಿತಂತೆ ಮಾಹಿತಿ ಪಡೆದು ಮಾತನಾಡಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳಾಗಿ ನಗರದ ಗುಂಡಿ ಮುಚ್ಚುವದು ನಮ್ಮೇಲ್ಲರ ಜವಬ್ದಾರಿಯಾಗಿದೆ. ಸರ್ಕಾರ ಮೇಲೆ ಒತ್ತಡ ಹಾಕಿ ಅನುದಾನ ಬಿಡುಗಡೆ ಪ್ರಯತ್ನಿಸೋಣ ಎಂದು ಹೇಳುವ ಮೂಲಕ ಚರ್ಚೆಗೆ ವಿರಾಮ ಹಾಕಿದರು.