×
Ad

ರಾಯಚೂರಿನಲ್ಲಿ ಮಾ.1ಕ್ಕೆ ಜಿಲ್ಲಾಮಟ್ಟದ ಉದ್ಯೋಗ ಮೇಳ

Update: 2025-02-25 15:34 IST

ರಾಯಚೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾಕೌಶಲ್ಯ ಮಿಷನ್, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿ.ಕೆ ಯೋಜನೆ ಮತ್ತು ಸಂಕಲ್ಪಯೋಜನೆಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾ.1ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹ ರಾಯಚೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮತ್ತು ಸ್ಥಳೀಯವಾಗಿ ಅಂದಾಜು 50ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತವೆ. ಜಿಲ್ಲೆಯ ವಿದ್ಯಾವಂತ ಯುವಕ ಯುವತಿಯರಿಗೆ ಪ್ರತಿಷ್ಠಿತ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವುದು ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿದ್ದು, ಈ ಉದ್ಯೋಗ ಮೇಳವು ಉದ್ಯೋಗದಾತರ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಉದ್ಯೋಗಗಳಿಗೆ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗ ಆಯ್ಕೆ ಮಾಡಿಕೊಳ್ಳಲು ಅವಕಾಶವಿರುತ್ತದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಜಾಬ್ ಸೀರ‍್ಸ್ ಜಾಲತಾಣ (www.raichurudyogmela.com) ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಭಾಗವಹಿಸಬಹುದಾಗಿರುತ್ತದೆ. ಅಥವಾ ಹೆಚ್ಚಿನ ಮಾಹಿತಿಗಾಗಿ ಶ್ರೀ ಮಂಜುನಾಥ -7975618955., ರವಿಕುಮಾರ-9880802184.,  ಮಂಜುನಾಥ-7795195171 ಅಥವಾ ಪ್ರಕಾಶ ಮೊ-9845339241 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News