×
Ad

ಮೇ 7ರಂದು ರಾಯಚೂರಿನಲ್ಲಿ ವಿಭಾಗೀಯ ಮಟ್ಟದ 'ಸಂವಿಧಾನ ಬಚಾವ್ ಮೆಹಂಗಾಯಿ ಹಟಾವೋ' ಪ್ರತಿಭಟನಾ ಸಮಾವೇಶ

Update: 2025-05-03 20:48 IST

ರಾಯಚೂರು : ‘ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮೇ. 7 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕದ ವಿಭಾಗೀಯ ಮಟ್ಟದ ‘ಸಂವಿಧಾನ ಬಚಾವೋ ಅಭಿಯಾನ’ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ’ ಎಂದು ಎಐಸಿಸಿ ಕಾರ್ಯದರ್ಶಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಾಲನಿಯಪ್ಪನ್‌ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ‘ಕೇಂದ್ರ ಸರ್ಕಾರವು ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ,‌ ಅಗತ್ಯ ವಸ್ತುಗಳ‌ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೀಡು ಮಾಡಿದೆ ಹಾಗೂ ಸಂವಿಧಾನದ ಆಶಯವನ್ನು ಗಾಳಿಗೆ ತೂರಿ‌ ಆಡಳಿತ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಮಾವೇಶ ನಡೆಯಲಿದೆ' ಎಂದು ಹೇಳಿದರು.

ಸಮಾವೇಶದಲ್ಲಿ 'ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು, ಕಲ್ಯಾಣ ಕರ್ನಾಟಕದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಈ ಸಮಾವೇಶ ಕಲ್ಯಾಣ ಕರ್ನಾಟಕ 7 ಜಿಲ್ಲೆಯ ಒಳಗೊಂಡಂತೆ ರಾಯಚೂರಿನಲ್ಲಿ ಸಮಾವೇಶ ನಡೆಸಲು ನಿರ್ಧಾರವಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಸದಸ್ಯರಾದ ಎ.ವಸಂತ ಕುಮಾರ, ಬಸನಗೌಡ ಬಾದರ್ಲಿ, ಶಾಸಕರಾದ ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಇಟಗಿ, ಶರಣಪ್ಪ ಮಟ್ಟೂರು, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷೆ ಶ್ರೀದೇವಿ ನಾಯಕ, ಕಾಂಗ್ರೆಸ್ ಮುಖಂಡ ಶಾಲಂ, ಮಾಧ್ಯಮ ವಕ್ತಾರ ಮಾಧ್ಯಮ ವಕ್ತಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News