×
Ad

ರಾಯಚೂರಿನಲ್ಲಿ ಡಾ. ಬಾಬು ಜಗಜೀವನ ರಾಮ್ 40ನೇ ಪುಣ್ಯತಿಥಿ ಆಚರಣೆ

Update: 2026-07-06 20:39 IST

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ 40ನೇ ಪುಣ್ಯತಿಥಿಯನ್ನು ಸೋಮವಾರ ನಗರದ ರೈಲ್ವೆ ನಿಲ್ದಾಣದ ಸಮೀಪವಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ. ಶಿವರಾಜ ಎಸ್. ಪಾಟೀಲ್, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಪ್ರವೀಣ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘ–ಸಂಸ್ಥೆಗಳ ಮುಖಂಡರು ಹಾಗೂ ಸಮಾಜದವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಡಾ. ಬಾಬು ಜಗಜೀವನ ರಾಮ್ ಅವರ ಪುತ್ಥಳಿಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಅವರ ಸಮಾಜಮುಖಿ ಸೇವೆ ಹಾಗೂ ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News