×
Ad

ರಾಯಚೂರು ಜಿಲ್ಲೆಯಲ್ಲಿ ಸೂರ್ಯಕಾಂತಿ ಉತ್ಪನ್ನಗಳ ಖರೀದಿ ಕೇಂದ್ರಗಳ ಸ್ಥಾಪನೆ: ಜಿಲ್ಲಾಧಿಕಾರಿ ಕೆ ನಿತೀಶ್

Update: 2025-09-29 17:47 IST

ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸರ್ಕಾರದ ಈ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿಗೆ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4.00 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 7,721 ರೂ.ಗಳಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು.

ಸೆಪ್ಟೆಂಬರ್ 26 ರಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬಂಧ ರಾಯಚೂರು ತಾಲೂಕಿನ ಹುಣಸಿಹಾಳಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 9743695467, ಸಿಂಧನೂರು ತಾಲೂಕಿನ ಜವಳಗೇರಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ:. 9964165509, ಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 9964315868, ಲಿಂಗಸಗೂರು ತಾಲೂಕಿನ ಮಟ್ಟೂರು ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 7337773317, ಮೆದಕಿನಾಳ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 9663704921, ಲಿಂಗಸುಗೂರು ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 7483685720, ಮಾನವಿ ತಾಲೂಕಿನ ತೋರಣದಿನ್ನಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 9902387316, ದೇವದುರ್ಗ ತಾಲೂಕಿನ ಜಾಲಹಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 7899312989, ಸಿರವಾರ ತಾಲೂಕಿನ ಸಿರವಾರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಮೊಬೈಲ್ ಸಂಖ್ಯೆ: 9880891919 ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪರಿಡಿಸಕೊಳ್ಳಲು ಜಿಲ್ಲೆಯ ರೈತರಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News