×
Ad

ಆಂಧ್ರಪ್ರದೇಶದಲ್ಲಿ ಬಸ್ ಬೈಕ್ ಗಳಿಗೆ ಢಿಕ್ಕಿ : ರಾಯಚೂರಿನ ಒಂದೇ ಕುಟುಂಬದ ಮೂವರು ಸೇರಿದಂತೆ ಐವರು ಮೃತ್ಯು

Update: 2025-03-11 18:21 IST

ರಾಯಚೂರು : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ಪಾಂಡವಗಲ್ ಗ್ರಾಮದ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಎರಡು ಬೈಕ್ ಗಳಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮಾನ್ವಿ ತಾಲೂಕಿನ ಒಂದೇ ಕುಟುಂಬದ ಮೂವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೇಮಾದ್ರಿ (55), ಪತ್ನಿ ನಾಗರತ್ನಮ್ಮ(48), ಪುತ್ರ ದೇವರಾಜು (25), ಆದೋನಿ ಮಂಡಲದ ಕುಪ್ಪಗಲು ಗ್ರಾಮದ ಈರಣ್ಣ, ಪತ್ನಿ ಆದಿಲಕ್ಷ್ಮಿ ಮೃತರು ಎಂದು ತಿಳಿದು ಬಂದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಬಸ್ ಬೈಕ್ ಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳನ್ನು ಆದೋನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆದೋನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News