×
Ad

ಮಾಜಿ ಶಾಸಕ ಸೈಯದ್ ಯಾಸಿನ್ ಅಂತಿಮ ದರ್ಶನ ಪಡೆದ ಸಂಸದ ಜಿ.ಕುಮಾರ ನಾಯಕ

Update: 2026-07-12 17:50 IST

ಬೆಂಗಳೂರು: ರಾಯಚೂರು ನಗರ ಕ್ಷೇತ್ರದ ಮಾಜಿ ಶಾಸಕ ದಿವಂಗತ ಸೈಯದ್ ಯಾಸಿನ್ ಅವರ ನಿಧನದ ಹಿನ್ನೆಲೆಯಲ್ಲಿ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಅವರು ಸೋಮವಾರ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಈ ವೇಳೆ ಯಾಸಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದ ಸಂಸದರು, ಕುಟುಂಬದ ಸದಸ್ಯರು ಹಾಗೂ ಬಂಧು-ಬಳಗದವರಿಗೆ ಸಾಂತ್ವನ ಹೇಳಿದರು.

ಮಾಜಿ ಶಾಸಕ ಸೈಯದ್ ಯಾಸಿನ್ ಅವರು ಜನಪರ ಸೇವೆ ಸಲ್ಲಿಸಿದ ಸೌಮ್ಯ ಸ್ವಭಾವದ ನಾಯಕರಾಗಿದ್ದು, ಅವರ ಅಗಲಿಕೆ ರಾಯಚೂರು ಜಿಲ್ಲೆಯ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂಸದ ಜಿ. ಕುಮಾರ ನಾಯಕ ಸಂತಾಪ ಸೂಚಿಸಿದರು. ದಿವಂಗತ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಎನ್.ಎಸ್. ಬೋಸರಾಜು, ಮುಖಂಡ ಜಯಂತರಾವ್ ಪತಂಗೆ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News