ನಾನು ಸಚಿವ ಸ್ಥಾನಕ್ಕೆ ಅಕಾಂಕ್ಷಿ : ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ
Update: 2025-10-21 22:08 IST
ರಾಯಚೂರು: ನವೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ ನಾನು ಸಚಿವ ಸ್ಥಾನದ ಅಕಾಂಕ್ಷಿಯಾಗಿದ್ದೇನೆ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ವಿದೆ ಎಂದು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸವಿತ್ತು, ಆದರೆ ಕೊನೆಯ ಕ್ಷಣದಲ್ಲಿ ಕೈ ತಪ್ಪಿತು. ಈಗ ನವೆಂಬರ್ ಕ್ರಾಂತಿ ಕುರಿತು ಚರ್ಚೆಗಳು ನಡೆಯುತ್ತಿವೆ. ಯಾವುದೇ ಕ್ರಾಂತಿಯಾಗದಿದ್ದರೂ ಸಚಿವ ಸಂಪುಟ ಪುನರ್‌ರಚನೆ ಆಗುವ ಸಾಧ್ಯತೆ ಇದೆ. ಹಿರಿತನ ಮತ್ತು ಅನುಭವದ ಆಧಾರದ ಮೇಲೆ ನನಗೆ ಸಚಿವ ಸ್ಥಾನ ಸಿಗಬಹುದು ಎಂದು ಹೇಳಿದರು.