×
Ad

ರಾಯಚೂರಿನಲ್ಲಿ ʼಮಾಕ್ ಡ್ರಿಲ್ʼ : ದಾಳಿಯ ಸಂದರ್ಭದಲ್ಲಿ ಅನುಸರಿಸುವ ಕ್ರಮದ ಬಗ್ಗೆ ಮಾಹಿತಿ

Update: 2025-05-07 19:05 IST

ರಾಯಚೂರು : ದಕ್ಷಿಣ ಮಧ್ಯೆ ರೈಲ್ವೆ ಗುಂತಕಲ್ ವಿಭಾಗ ವ್ಯಾಪ್ತಿಗೆ ಬರುವ ರಾಯಚೂರು ರೈಲ್ವೆ ಸ್ಟೇಷನ್ ಮುಂಭಾಗದಲ್ಲಿ ಇಂದು ಸಂಜೆ ಬಾಂಬ್ ದಾಳಿಯ ಸಂದರ್ಭದಲ್ಲಿ ನಾಗರಿಕ ರಕ್ಷಣಾ ಅಣುಕು ಕವಾಯತು (ಮಾಕ್ ಡ್ರಿಲ್) ನಡೆಯಿತು.

ರೈಲ್ವೆ ಸಿವಿಲ್ ಡಿಫೆನ್ಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ತಂಡದಿಂದ ಮಾಕ್ ಡ್ರಿಲ್ ಪ್ರದರ್ಶನ ನಡೆಡಿದ್ದು, ದೇಶದಲ್ಲಿ ಶತ್ರು ರಾಷ್ಟ್ರ ಬಾಂಬ್ ಅಥವಾ ಯಾವುದೇ ವೈಮಾನಿಕ ದಾಳಿಯ ಸಂದರ್ಭದಲ್ಲಿ ನಾಗರಿಕ ರಕ್ಷಣೆ ಯಾವ ರೀತಿಯಲ್ಲಿ ಮಾಡಲಾಗುತ್ತೆ ಎಂಬುದರ ಬಗ್ಗೆ ಅಣಕು ಪ್ರದರ್ಶನ ಮಾಡಲಾಯಿತು.

ಅಗ್ನಿ ದುರಂತ ಸಂಭವಿಸಿದಾಗ ಯಾವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಟ್ಟಿಗೆಗಳಿಗೆ ಬೆಂಕಿ ಹೊತ್ತಿಸಿ ಅಣಕು ಪ್ರದರ್ಶನ ಮಾಡಲಾಯಿತು.

ಇದೇ ವೇಳೆ ದಾಳಿಯಲ್ಲಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಾಗ ಯಾವ ರೀತಿಯಲ್ಲಿ ಪ್ರಾಣ ಕಾಪಾಡಬೇಕು ಎಂಬುವುದರ ಕುರಿತು ಸಾರ್ವಜನಿಕರಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ರೈಲ್ವೆ ಪೊಲೀಸರು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News