ರಾಯಚೂರು: ಸಾಮರಸ್ಯವೇ ನಾಡಿನ ಸಂಸ್ಕೃತಿಯ ಜೀವಾಳವಾಗಿದ್ದು, ಸರ್ವಧರ್ಮ ರಕ್ಷಣೆ, ಸತ್ಯಾರಾಧನೆ, ಧರ್ಮನೀತಿ, ಸರ್ವಧರ್ಮ ಸಹಿಷ್ಣತೆ ಮೂಲಕ ಸಹಬಾಳ್ವೆ, ಸೌಹಾರ್ದತೆ, ಭಾವೈಕ್ಯತೆ ಮೆರೆಯುವ ಮೂಲಕ ನಾಡು ನುಡಿ ರಕ್ಷಣೆ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಡಾ.ಅಜಯ ಸಿಂಗ್ ಹೇಳಿದರು.

ರವಿವಾರ ಜಿಲ್ಲಾಡಳಿತದಿಂದ ನಗರದ ಮಹಾತ್ಮಗಾಂಧಿ ಕ್ರೀಢಾಂಗಣದಲ್ಲಿ ಆಯೋಜಿಸಲಾಗಿದ್ದ 21 ನೇ ರಾಜ್ಯೋತ್ಸವದ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಡಾ.ಅಜಯ ಸಿಂಗ್, ಕನ್ನಡ ನಾಡು ಸಾಕಷ್ಟು ವಿಶೇಷತೆಗಳನ್ನು ಹೊಂದಿದ್ದು ಕರ್ನಾಟಕ ಕೇವಲ ಭೂಪ್ರದೇಶವಷ್ಟೇ ಅಲ್ಲ. ಸಂಸ್ಕೃತಿ, ಜನ ಸಮುದಾಯ, ಜೀವನಪದ್ದತಿ ಎಲ್ಲವೂ ಕನ್ನಡಮಯವಾಗಿದೆ. ಹರಿದು ಹಂಚಿಹೋಗಿದ್ದ ಕನ್ನಡ ಭಾಷಿಗರನ್ನು ಒಗ್ಗೂಡಿಸಿ ಕರ್ನಾಟಕ ಏಕೀಕರಣದ ಹೋರಾಟ ನೂರಾರು ವರ್ಷಗಳಿಂದ ನಡೆದು ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡಿತು ಎಂದು ಹೇಳಿದರು.  

ವೇದಿಕೆಯಲ್ಲಿ ಜಿಲ್ಲಾಧಿಕಾರಿ ಪೂವಿತಾ.ಎಸ್., ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ಸೇರಿದಂತೆ ಅನೇಕ ರಾಜಕೀಯ ಮುಖಂಡರುಗಳು, ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಮಕ್ಕಳು ಭಾಗಿಯಾಗಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor