×
Ad

ರಾಯಚೂರಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ : ಧ್ವಜಾರೋಹಣ ನೆರವೇರಿಸಿದ ಸಚಿವ ಶರಣಪ್ರಕಾಶ್‌ ಪಾಟೀಲ್

Update: 2025-11-01 09:39 IST

ರಾಯಚೂರು: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಯಚೂರಿನ ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಧ್ವಜಾರೋಹಣ ಮಾಡಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಸರಕಾರ ಜನಪರ ಆಡಳಿತ ನೀಡುತ್ತಿದೆ. ನೆರೆ ಹಾವಳಿಯಿಂದ ತತ್ತರಿಸಿದ ಉತ್ತರ ಕರ್ನಾಟಕಕ್ಕೆ ನೆರೆ ಪರಿಹಾರ ಘೋಷಿಸಿದೆ. ಕಲ್ಯಾಣ ಕರ್ನಾಟಕದ ಏಳಿಗೆಗೆ ಅನೇಕ ಯೋಜನೆ ರೂಪಿಸಿದೆ. ಕೆಕೆಆರ್ ಡಿಬಿಗೆ ಪ್ರತಿವರ್ಷ 5 ಸಾವಿರ ಕೋಟಿ ರೂ. ನೀಡುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಅಭಿವೃದ್ಧಿಗೆ ಏರ್ ಪೋರ್ಟ್, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೈವೆ ಸೇರಿ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಬಳಿಕ ಪೊಲೀಸ್ ಕಮಾಂಡರ್ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಇದೇ ವೇಳೆ ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಬಾಬು ಭಂಡಾರಿಗಲ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ, ವೈದ್ಯಕೀಯ ಕ್ಷೇತ್ರದಲ್ಲಿ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಿ.ಸಾಗರ, ಸಮಾಜ ಸೇವೆ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ್ ಮಿರ್ಜಾಪೂರ, ಕಲಾ ಕ್ಷೇತ್ರದಲ್ಲಿ ಸಿಂಧನೂರು ತಾಲೂಕಿನ ಸುಕಾಲಪೇಟೆ ನಾರಾಯಣಪ್ಪ ಮಾಡಸಿರವಾರ, ಕೃಷಿ ಕ್ಷೇತ್ರದಲ್ಲಿ ರಾಯಚೂರು ತಾಲೂಕಿನ ಪಲ್ಕಂದೊಡ್ಡಿ ಗ್ರಾಮದ ಹನುಮರೆಡ್ಡಿ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ‌ ವೇಳೆ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News