×
Ad

ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ವಿರೋಧಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ

Update: 2025-12-08 12:41 IST

‎ಲಿಂಗಸುಗೂರು: ತಾಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕು. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರು ಮಾತನಾಡಬೇಕು ಎಂದು ಆಗ್ರಹಿಸಿ ಲಿಂಗಸೂಗೂರು ತಾಲೂಕು ಅಭಿವೃದ್ಧಿ ಸಮಿತಿಯಿಂದ ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ‎ಈಗಾಗಲೇ ತಾಲೂಕಿನ ಮಂಜೂರಾತಿ ಹಂತದಲ್ಲಿದ್ದ ಪ್ರಾದೇಶಿಕ ಸಾರಿಗೆ ಕಚೇರಿ , ಕೆಪಿಟಿಸಿಎಲ್‌ ಕಚೇರಿ ಹಾಗೂ ಜಿಲ್ಲಾ ನ್ಯಾಯಾಲಯ ಸೇರಿ ತಾಲೂಕಿನ ಒಂದೊಂದಾಗಿ ಕಚೇರಿಗಳು ಸ್ಥಳಾಂತರವಾಗುತ್ತಿವೆ. ಲಿಂಗಸುಗೂರು ತಾಲೂಕು ಅಭಿವೃದ್ಧಿ ಮಾಡುತ್ತೇವೆಂದು ಕಳೆದ 15 ವರ್ಷಗಳಿಂದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸ್ಥಳೀಯರಾದ ಹಾಲಿ ವಿಧಾನ ಪರಿಷತ್ತು ಸದಸ್ಯ ಶರಣೇಗೌಡ ಬಯ್ಯಾಪುತ ಅವರು ತಮ್ಮ ಸ್ವಅಭಿವೃದ್ಧಿ ಮಾಡಿಕೊಳ್ಳುತ್ತಿದ್ದೀರಿ ವಿನಹ ಕ್ಷೇತ್ರದ ಅಭಿವೃದ್ಧಿಯ ಕಡೆ ಎಳ್ಳಷ್ಟು ಗಮನ ಕೊಟ್ಟಿಲ್ಲ ಎಂದು ದೂರಿದರು.

‎ಒಂದು ವಾರದಲ್ಲಿ ಕೃಷಿ ನಿರ್ದೇಶಕರ ಕಚೇರಿ-2 ಸ್ಥಳಾಂತರ ಆದೇಶವನ್ನು ರದ್ದುಪಡಿಸದಿದ್ದರೆ ಮುಂದಿನ ದಿನಗಳಲ್ಲಿ  ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಈ ವೇಳೆ ಸಮಿತಿಯ ಮುಖಂಡರಾದ ರಮೇಶವೀರಾಪೂರು, ಶಿವಪುತ್ರಪ್ಪಗೌಡ, ಹಾಜಿಬಾಬು ಕಟ್ಟಿಮನಿ, ಬಾಬಾಜಾನಿ  ಇದ್ದರು.      

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News