×
Ad

ಲಿಂಗಸುಗೂರು | ಗುರುಗುಂಟ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿಯ ಮೇಲುಸ್ತುವಾರಿ ಸಮಿತಿ ಸ್ಥಾಪನೆ

Update: 2025-08-20 18:32 IST

ಲಿಂಗಸುಗೂರು: ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC)ಗೆ ಹೊಸ ನೇಮಕಾತಿ ಚುನಾವಣೆ ನಡೆಯಿತು.

ಚುನಾವಣೆಯಲ್ಲಿ ಬಂದೇನವಾಜ್ ಜಾಲಹಳ್ಳಿ ಅವರನ್ನು ಅಧ್ಯಕ್ಷರಾಗಿ ಹಾಗೂ ಅಬ್ದುಲ್ ರಹೀಮ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಶಾಲೆಯ ಸಮಿತಿಯ ಆಯ್ಕೆಯಿಂದ ಮುಂದಿನ ದಿನಗಳಲ್ಲಿ ಶಾಲೆಯ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಬದ್ಧತೆಯಿಂದ ಕಾರ್ಯನಿರ್ವಹಿಸುವ ಬಗ್ಗೆ ತಿಳಿಸಿದರು.

ಶಾಲಾ ಸಮಿತಿಯ ಇತರ ಸದಸ್ಯರ ನೇಮಕವೂ ನಡೆದಿದ್ದು, ಪೋಷಕರು ಹಾಗೂ ಸ್ಥಳೀಯ ಶಿಕ್ಷಣ ಹಿತಾಸಕ್ತರು ಇದರ ಭಾಗಿಯಾಗಿದ್ದರು. ಹೊಸ ತಂಡವು ವಿದ್ಯಾರ್ಥಿಗಳ ಹಿತಾಸಕ್ತಿ, ಶಿಕ್ಷಣದ ಗುಣಮಟ್ಟದ ಉತ್ತರವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News