×
Ad

ಲಿಂಗಸೂಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ವಿರೋಧಿಸಿ ರೈತರ ಉಪವಾಸ ಧರಣಿ

Update: 2025-12-06 11:14 IST

ಲಿಂಗಸೂಗೂರು: ಕೃಷಿ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ ವಿರೋಧಿಸಿ ಕಳೆದ 13 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಆದ್ದರಿಂದ ಇಂದಿನಿಂದ ಉಪವಾಸ ಧರಣಿ ಮಾಡುತ್ತಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುತ್ರ ಗೌಡ ನಂದಿಹಾಳ ಹೇಳಿದ್ದಾರೆ.

ಲಿಂಗಸೂಗೂರು ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರ ಮಾಡಿದ್ದನ್ನು ವಿರೋಧಿಸಿ ಕಳೆದ 13 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಜಿಲ್ಲಾಧಿಕಾರಿ,

ಸಂಬಂಧಪಟ್ಟ ಅಧಿಕಾರಿಗಳು ನಮಗೆ ಸಂಬಂಧವೆ ಇಲ್ಲ ಎಂಬಂತೆ ಕೂತಿದ್ದಾರೆ. ಪ್ರಗತಿಪರ ಸಂಘಟನೆಗಳು ನಮ್ಮ ಹೋರಾಟಕ್ಕೆ ಬೆಂಬಲವಾಗಿ ನಿಂತಿವೆ. ಮುಂದಿನ ದಿನಗಳಲ್ಲಿ ಕುಟುಂಬ ಸಮೇತ ಉಪವಾಸ ಧರಣಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಆನಂದ, ಹನುಮನಗೌಡ,ಅಮರೇಶ ಪವಾರ, ಲಕ್ಷ್ಮಣ, ಅಮರೇಶ ಗೋಸ್ಲೆ, ಹನುಮಂತ ಕುರ್ಲಿ, ಬಸವರಾಜ ಗೋಸ್ಲೆ, ಶರೀಫ್, ಸಿದ್ದಪ್ಪ ಹಾಗೂ ಇತರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News