ಲಿಂಗಸುಗೂರು | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
Update: 2025-12-22 21:47 IST
ಸಾಂದರ್ಭಿಕ ಚಿತ್ರ
ಲಿಂಗಸುಗೂರು : ತಾಲೂಕಿನ ಹಿರೇ ನಗನೂರು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ರೋಡ್ ರೋಲರ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಕೊಲೆಯೋ, ಆತ್ಮಹತ್ಯೆ ಎಂದು ತಿಳಿದು ಬಂದಿಲ್ಲ.
ಮೃತರನ್ನು ಹಟ್ಟಿ ಪಟ್ಟಣದ ನಿವಾಸಿ ಜ್ಯೋತಿ (28) ಎಂದು ಗುರುತಿಸಲಾಗಿದೆ.
ಜ್ಯೋತಿ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.