ಲಿಂಗಸುಗೂರು: ವಿದ್ಯುತ್ ಆಘಾತದಿಂದ ಯುವಕ ಮೃತ್ಯು
Update: 2025-10-29 11:04 IST
ಸಾಂದರ್ಭಿಕ ಚಿತ್ರ
ರಾಯಚೂರು: ಕೆಲಸದ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಕಾರ್ಮಿಕ ಯುವಕನೋರ್ವ ಮೃತಪಟ್ಟ ಘಟನೆ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತನನ್ನು ಲಿಂಗಸುಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ದುರುಗೇಶ ಬೇರಗಿ (20) ಮೃತಪಟ್ಟವರು.
ಇವರು ಕರಡಕಲ್ ಗ್ರಾಮದ ಎಸ್ ಟಿ ಹಾಸ್ಟೆಲ್ ಗೆ ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಿದ್ಯುತ್ ಪ್ರವಹಿಸುತ್ತಿದ್ದ ವೈರ್ ಆಕಸ್ಮಿಕವಾಗಿ ತಗುಲಿದ್ದರಿಂದ ಆಘಾತಕ್ಕೆ ಒಳಗಾಗಿದ್ದ ದುರುಗೇಶರನ್ನು ತಕ್ಷಣ ಲಿಂಗಸುಗೂರಿನ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.