×
Ad

ಲಿಂಗಸುಗೂರು | ತಲೆಕೆಳಗಾಗಿ ಹಾರಿದ ರಾಷ್ಟ್ರ ಧ್ವಜ : ಫೋಟೊ ವೈರಲ್‌

Update: 2026-01-27 18:19 IST

ಲಿಂಗಸುಗೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಘಟನೆ ಲಿಂಗಸುಗೂರು ತಾಲೂಕಿನ ಆಮಿದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ದೇಶಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿರುವ ವೇಳೆ, ಆಮಿದಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಗುರುಪಾದಪ್ಪ ಅವರು ತಪ್ಪಾಗಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಹಾಡಿಸಿ, ನಂತರ ಧ್ವಜವನ್ನು ಕೆಳಗಿಳಿಸಿ ಪುನಃ ಸರಿಯಾದ ರೀತಿಯಲ್ಲಿ ಹಾರಿಸಲಾಗಿದೆ ಎಂದು ತಿಳಿದುಬಂದಿದೆ.

ಗಣರಾಜ್ಯೋತ್ಸವದಂತಹ ಮಹತ್ವದ ರಾಷ್ಟ್ರೀಯ ಹಬ್ಬದಂದು ಇಂತಹ ಅವಘಡ ಸಂಭವಿಸಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನವೆಂದು ಆರೋಪಿಸಲಾಗಿದ್ದು, ಪ್ರಭಾರಿ ಮುಖ್ಯಶಿಕ್ಷಕರ ಬೇಜವಾಬ್ದಾರಿತನದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News