ಲಿಂಗಸುಗೂರು ಪಟ್ಟಣದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Update: 2026-01-02 14:55 IST
ಲಿಂಗಸುಗೂರು : ಪಟ್ಟಣದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಟ್ಟಣದ ಮಿನಿ ವಿಧಾನ ಸೌಧದಲ್ಲಿರುವ ತಹಶೀಲ್ದಾರ ಕಚೇರಿ, ಉಪ ನೋಂದಾಣಿ ಅಧಿಕಾರಿಗಳ ಕಚೇರಿ ಹಾಗೂ ಪುರಸಭೆ ಕಾರ್ಯಾಲಯದ ಮೇಲೆ ಲೋಕಾಯುಕ್ತರು ದಾಳಿ ಮಾಡಿ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹಾಗೂ ಲಂಚದ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.