×
Ad

ಮಾನ್ವಿ | ಬಾಲಕಿ ಮೇಲೆ ಅತ್ಯಾಚಾರ ಆರೋಪ : ಪ್ರಕರಣ ದಾಖಲು

Update: 2025-10-10 17:32 IST

ಸಾಂದರ್ಭಿಕ ಚಿತ್ರ

ರಾಯಚೂರು: ಮಾನ್ವಿ ತಾಲೂಕಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಾಲಕಿಯನ್ನು ಆರೋಪಿಯೊರ್ವ ಬಲವಂತವಾಗಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ವಿಷಯ ಬಹಿರಂಗ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ಧಾನೆ ಎಂದು ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಬಾಲಕಿ ವಿಷಯ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.

ಬಾಲಕಿಯ ತಾಯಿ ನೀಡಿದ ದೂರಿನ‌ ಮೇರೆಗೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಾಲಕಿಯು 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಬಾಲಕಿ ಯಾರು ಅತ್ಯಾಚಾರ ಮಾಡಿದ್ದಾರೆ ಎಂದು ಹೇಳುತ್ತಿಲ್ಲ. ಆರೋಪಿ ಹೆಲ್ಮೆಟ್ ಧರಿಸಿದ್ದನು ಎಂದಷ್ಟೇ ಹೇಳಿಕೆ ನೀಡಿದ್ದಾಳೆ ಎಂದು ಮಾನ್ವಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಹೇಳಿಕೆ ಆಧಾರದ ಮೇಲೆ ವೈದ್ಯಕೀಯ ತಪಾಸಣೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆ ತರಲಾಗಿತ್ತು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News