×
Ad

ಮದ್ಲಾಪುರ: ತುಂಗಭದ್ರಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

Update: 2025-12-02 14:31 IST

ಮಾನ್ವಿ: ತಾಲ್ಲೂಕಿನ ಮದ್ದಾಪುರ ಗ್ರಾಮದ ಹತ್ತಿರ ಹರಿಯುವ ತುಂಗಭದ್ರಾ ನದಿಯಲ್ಲಿ ಭಾನುವಾರ ಮೊಸಳೆ ಪ್ರತ್ಯಕ್ಷವಾಗಿದೆ.

ನದಿಯಲ್ಲಿ ಈಚೆಗೆ ದೊಡ್ಡ ಗಾತ್ರದ ಮೊಸಳೆಗಳು ಕಾಣುತ್ತಿರುವುದು ಆತಂಕ ಮೂಡಿಸಿದೆ ಎಂದ ಗ್ರಾಮಸ್ಥರು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೆ ಪರಿಶೀಲನೆ ಮಾಡಿ ಮೊಸಳೆಗಳ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ವಲಯ ಅರಣ್ಯಾಧಿಕಾರಿ ಪುರುಷೋತ್ತಮಅವರು, 'ಗ್ರಾಮದ ಜನರು ನೀರಿಗೆ ಇಳಿಯುವ ಸಮಯದಲ್ಲಿ, ನದಿ ನೀರಿಗೆ ತಮ್ಮ ಜಾನುವಾರುಗಳನ್ನು ಇಳಿಸುವಾಗ ಜಾಗ್ರತೆ ವಹಿಸಬೇಕು. ಅರಣ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ನದಿಯಲ್ಲಿನ ಮೊಸಳೆಗಳ ಬಗ್ಗೆ ನಿಗಾವಹಿಸಲಿದ್ದಾರೆ ಎಂದರು.

ಮೊಸಳೆ ಕಂಡು ಬಂದಲ್ಲಿ ಅವುಗಳನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಮುನ್ನೆಚ್ಚರಿಕೆಯಾಗಿ ಗಾಮಸ್ಥರಿಗೆ ಜಾಗೃತಿ ಮೂಡಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗುವುದು. ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಮೊಸಳೆಗಳ ಅಪಾಯ ಇರುವ ಕುರಿತು ಜಾಗೃತಿ ಫಲಕ ಅಳವಡಿಸಲಾಗುವುದು'ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News