×
Ad

ಮಸ್ಕಿ | ವಿಕಲಚೇತನರ ಸಮುದಾಯ ಭವನದ ನಿರ್ಮಾಣಕ್ಕಾಗಿ ಮನವಿ

Update: 2025-08-20 18:28 IST

ಮಸ್ಕಿ : ಪಟ್ಟಣದಲ್ಲಿ ವಿಕಲಚೇತನರ ಸಮುದಾಯ ಭವನದ ನಿರ್ಮಾಣಕ್ಕಾಗಿ ಸೂಕ್ತ ನಿವೇಶನವನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್ ಪಿ ಡಿ ಟಾಸ್ಕ್ ಪೋರ್ಸ್‌ ವತಿಯಿಂದ ಮಸ್ಕಿ ಪುರಸಭೆ ಕಾರ್ಯಾಲಯಕ್ಕೆ‌ ಬುಧವಾರ ಮನವಿ ಸಲ್ಲಿಸಲಾಯಿತು.

ನಮ್ಮ ಸಂಘಟನೆಯು ಸುಮಾರು 7 ವರ್ಷಗಳಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಕಲಚೇತನರಿಗೆ ಶೈಕ್ಷಣಿಕ, ಉದ್ಯೋಗ, ಆರೋಗ್ಯ ಹಾಗೂ ಪುನಶ್ಚತನಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳ ಸೌಲಭ್ಯಗಳನ್ನು ಕಲ್ಪಿಸಲು‌ ಶ್ರಮಿಸುತ್ತಾ ಬಂದಿದೆ. ವಿಕಲಚೇತನ ವ್ಯಕ್ತಿಗಳ ಹಕ್ಕುಗಳ 2016 ಕಾಯ್ದೆಯನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸುವುದು ಸಂಘಟನೆಯ ಮುಖ್ಯ ಉದ್ದೇಶವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ನಮ್ಮ ಸಂಘಟನೆಯ ಸಭೆಗಳು, ಸಂಘಟನೆಯ ಕಾರ್ಯ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಿಗೆ ಸೂಕ್ತವಾದ ಕಟ್ಟಡವಿಲ್ಲದ ಕಾರಣದಿಂದ ಸಮಸ್ಯೆಯಾಗುತ್ತಿದೆ. ನಮ್ಮ ಮನವಿಗೆ ಸ್ಪಂದಿಸಿ ಮಸ್ಕಿ ಪಟ್ಟಣದಲ್ಲಿ ವಿಕಲಚೇತನರ ಸಮುದಾಯ ಭವನವನ್ನು ನಿರ್ಮಾಣ ಮಾಡಲು ಪುರಸಭೆಯಿಂದ ಸೂಕ್ತ ನಿವೇಶನವನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

ಈ‌ ವೇಳೆ ಸಂಘದ ತಾಲೂಕು ಅಧ್ಯಕ್ಷ ರಾಯಪ್ಪ, ಮುಹಮ್ಮದ್ ಜಾಫರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News