ಮಸ್ಕಿ | ಏಕಲವ್ಯ ವಸತಿ ಶಾಲೆಯ ಪ್ರಿನ್ಸಿಪಾಲ್ ವಿರುದ್ಧ ಕ್ರಮಕ್ಕೆ ಪತ್ರಕರ್ತ ಸಂಘ ಆಗ್ರಹ
Update: 2025-08-25 22:59 IST
ರಾಯಚೂರು: ಮಸ್ಕಿ ತಾಲ್ಲೂಕಿನ ಅರಕೇರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊತ್ತದೊಡ್ಡಿ ಏಕಲವ್ಯ ವಸತಿ ಶಾಲೆಯ ಪ್ರಿನ್ಸಿಪಲ್ ಅವರು ಪತ್ರಕರ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕ ಘಟಕದ ವತಿಯಿಂದ ತಹಸೀಲ್ದಾರ್ ಗೆ ಮನವಿ ಸಲ್ಲಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಕೊತ್ತದೊಡ್ಡಿ ವಸತಿ ಶಾಲೆಯಲ್ಲಿ ಅನಾರೋಗ್ಯಕ್ಕೆ ತುತ್ತಾದ ವಿದ್ಯಾರ್ಥಿಗಳು ಅರಕೇರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಳ್ಳುವ ಸಂದರ್ಭದಲ್ಲಿ ಪತ್ರಕರ್ತರು ವಿಡಿಯೋ, ಫೋಟೊ ಚಿತ್ರಿಕರಿಸಿಕೊಂಡಿದ್ದರು. ಈ ವೇಳೆ ಪ್ರಿನ್ಸಿಪಾಲ್ ಸುರೇಶ ವರ್ಮಾ ಮಾಹಿತಿ ಮತ್ತು ಚಿತ್ರ ಸಂಗ್ರಹಿಸಿದ ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿ ನಿಂದಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಪದಾಧಿಕಾರಿಗಳು ಇದ್ದರು.