ಮಸ್ಕಿ | ಸಹಕಾರಿ ಬ್ಯಾಂಕ್, ಭೂ ದಾಖಲೆಗಳ ಇಲಾಖೆಯಲ್ಲಿ ಧ್ವಜಾರೋಹಣ ಮಾಡದೇ ನಿಯಮ ಉಲ್ಲಂಘನೆ
Update: 2025-08-15 22:26 IST
ಮಸ್ಕಿ : ದೇಶದಾದ್ಯಂತ 79ನೇ ಸ್ವಾತಂತ್ರೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದರೆ ಜಿಲ್ಲೆಯ ಮಸ್ಕಿ ತಾಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡದೇ ಅಗೌರವ ತೋರಿದ ಆರೋಪ ಕೇಳಿ ಬಂದಿದೆ.
ಮಸ್ಕಿ ತಾಲೂಕಿನ ಕೆಲವು ಕಚೇರಿ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಧ್ವಜಾರೋಹಣ ಮಾಡದೇ ನಿರ್ಲಕ್ಷ್ಯ ವಹಿಸಿದ್ದು, ಸಾರ್ವಜನಿಕ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸರ್ಕಾರಿ ಅಧಿಕಾರಿಗಳೇ ಧ್ವಜಾರೋಹಣ ಮಾಡದೇ ಅಗೌರವ ತೋರಿದ್ದು, ಖಂಡನೀಯ. ಸಂಭಂದಪಟ್ಟ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.