ಆ.15ರಂದು ರಾಯಚೂರಿನಲ್ಲಿ ಸಚಿವ ಅಜಯ್ ಸಿಂಗ್ ಧ್ವಜಾರೋಹಣ

Update: 2026-08-11 23:05 IST

ರಾಯಚೂರು : ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಯಚೂರಿನಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವ ಡಾ. ಅಜಯ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಆದೇಶ ಹೊರಡಿಸಿದ್ದಾರೆ.

ಕಳೆದ ವರ್ಷ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ. ಶರಣಪ್ರಕಾಶ ಪಾಟೀಲ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಿದ್ದರು.

ಈ ಬಾರಿ ಸಚಿವ ಸಂಪುಟ ಪುನರ್‌ವ್ಯವಸ್ಥೆಯ ಬಳಿಕ ರಾಯಚೂರು ಜಿಲ್ಲೆಗೆ ಇನ್ನೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿಲ್ಲ. ಆದರೆ ಬರ ಅಧ್ಯಯನ ಹಾಗೂ ಪ್ರಗತಿ ಪರಿಶೀಲನೆಗಾಗಿ ಸಚಿವ ಡಾ. ಅಜಯ್ ಸಿಂಗ್ ಅವರನ್ನು ಈಗಾಗಲೇ ನೇಮಕ ಮಾಡಲಾಗಿತ್ತು. ಇದೀಗ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಜವಾಬ್ದಾರಿಯನ್ನೂ ಅವರಿಗೆ ವಹಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News