ರಾಯಚೂರು | ವಿಶ್ವಕರ್ಮ ಭಾವಚಿತ್ರ ಮೆರವಣಿಗೆಗೆ ಸಚಿವರಿಂದ ಚಾಲನೆ
ರಾಯಚೂರು : ವಿಶ್ವಕರ್ಮ ಜಯಂತಿಯ ಅಂಗವಾಗಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭಾವಚಿತ್ರ ಮೆರವಣಿಗೆ ಆಯೋಜಿಸಲಾಯಿತು.
ನಗರದ ಮಂತ್ರಾಲಯ ರಸ್ತೆಯಲ್ಲಿರುವ ವಿಶ್ವಕರ್ಮ ವೃತ್ತದಲ್ಲಿ ಭಾವಚಿತ್ರ ಮೆರವಣಿಗೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ–ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಮಹಾನಗರ ಪಾಲಿಕೆಯ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.