×
Ad

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ

Update: 2025-12-02 19:27 IST

ರಾಯಚೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಬೌದ್ದ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 05 ಜೋಡಿಗಳು ಭಾಗವಹಿಸಿರತಕ್ಕದ್ದು. ಜಿಲ್ಲಾ ನೋಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟಗಳು, ದೇವಸ್ಥಾನದ ಟ್ರಸ್ಟಗಳು, ಸಂಘಗಳು, ಸೊಸೈಟಿಗಳು ವಕ್ಫ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಬಯಸುವ ವಧು-ವರರ ವಾರ್ಷಿಕ ಆದಾಯ 5 ಲಕ್ಷ ರೂ.ಗಳನ್ನು ಮೀರಿರಬಾರದು.  

ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದೆ. ಆದರೆ ತಾಂತ್ರಿಕ ಕಾರಣಗಳಿಂದ ಆನ್‌ಲೈನ್ ಅರ್ಜಿ ಸಲ್ಲಿಸಲು ತೊಂದರೆ ಉಂಟಾದಲ್ಲಿ ಅಂತಹ ಸಂದರ್ಭದಲ್ಲಿ ಮಾತ್ರ ಅನುಮೋದಿತ ಆಫ್‌ಲೈನ್ ಅರ್ಜಿ ನಮೂನೆಗಳನ್ನು ಜಿಲ್ಲಾ ಅಥವಾ ತಾಲೂಕು ಕಚೇರಿಯಿಂದ ಪಡೆದು ಸಲ್ಲಿಸಬಹುದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News