×
Ad

ಮುದಗಲ್ | ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದು ಇಬ್ಬರು ಮೃತ್ಯು

Update: 2025-07-23 19:21 IST

ರಾಯಚೂರು: ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ರಮೇಶ ಗುಡದಪ್ಪ (25 ) ಹಾಗೂ ಅನುಸೂಯ ರಮೇಶ ( 22 ) ಸ್ಥಳದಲ್ಲೇ ಮೃತಪಟ್ಟರೆ, ಸೌಜನ್ಯ ರಮೇಶ ( 3) ಎಂಬ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 

ಮುದಗಲ್ ಪಟ್ಟಣದಿಂದ ನಾಗಲಾಪೂರು ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೃಹತ್ ಗಾತ್ರದ ಮರ ಬಿದ್ದಿದೆ. ಸ್ಥಳಕ್ಕೆ ಮುದಗಲ್ ಪೊಲೀಸ್ ಠಾಣೆ ಪಿಎಸ್ಐ ವೆಂಕಟೇಶ್ ಮಾಡಿಗೇರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News