ರಾಯಚೂರು: ಜೂನ್ 14 ರಂದು ಅಂಬೇಡ್ಕರ್ ಕೃತಿ 'ರೂಪಾಯಿ ಸಮಸ್ಯೆʼ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ
ರಾಯಚೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜೂನ್ 14 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲನಿಕೇತನ ಸಭಾಂಗಣದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕೀರ್ಣ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಯಂಕಣ್ಣ ತಿಳಿಸಿದರು.
ಅವರಿಂದು ಮಾಧ್ಯಮ ಗೋಷ್ಠಿ ಯಲ್ಲಿ ಮಾತನಾಡಿ, ಸಂಸದ ಜಿ. ಕುಮಾರನಾಯಕ, ಉದ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಹಾಗೂ ಸಣ್ಣ ನೀರಾವರಿ ಸಚಿವ ಎನ್. ಎಸ್. ಬೋಸರಾಜು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಗೋಷ್ಠಿ-1 ಆರ್ಥಿಕ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಕೃಷ್ಣ ರಾಜ ಅವರು 'ರೂಪಾಯಿ ಸಮಸ್ಯೆ -ಅದರ ಮೂಲ ಮತ್ತು ಪರಿಹಾರ' ಡಾ. ಬಿ. ಆರ್. ಅಂಬೇಡ್ಕರ್ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಶಿವರಾಜಪ್ಪ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಗೋಷ್ಠಿ-2 ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಕಾಂಬ್ಳೆ ಪ್ರಕಾಶ ಶಂಕರ ಅವರು 371(ಜೆ) ಪ್ರಾದೇಶಿಕ ಅಸಮತೋಲನ-ಇದರ ಕಾರಣಗಳು ಮತ್ತು ಪರಿಹಾರಗಳು ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ರಜಾಕ್ ಉಸ್ತಾದ್ ಅವರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಂಜೆ 4 ಕ್ಕೆ ನಗರ ಶಾಸಕ ಶಿವರಾಜ ಪಾಟೀಲ ರತ್ನಪ್ರಭ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಉಪ ನೋಂದಣಾಧಿಕಾರಿ ಕೆ. ವೆಂಕಟೇಶ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಪ್ರಾಣೇಶ ಕುಲಕರಿ, ಶಿವಯ್ಯ, ಮಹಾದೇವಪ್ಪ, ಚಂದ್ರಶೇಖರ ಉಪಸ್ಥಿತರಿದ್ದರು.