×
Ad

ನಾರಾಯಣಪೂರ ಬಲದಂಡೆ ಕಾಲುವೆಗೆ ಎ.20 ರವರೆಗೆ ನೀರು ಹರಿಸಲು ಒತ್ತಾಯಿಸಿ ಹೆದ್ದಾರಿ ತಡೆದು ಪ್ರತಿಭಟನೆ

Update: 2025-03-13 16:46 IST

ರಾಯಚೂರು : ನಾರಯಣಪೂರ ಬಲದಂಡೆ ಕಾಲುವೆಗೆ ಎಪ್ರಿಲ್ 20 ವರೆಗೆ ನೀರು ಹರಿಸಲು ಒತ್ತಾಯಿಸಿ ದೇವದುರ್ಗ ತಾಲೂಕಿನ ಅಮರಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ನೀರು ಬಳಕೆದಾರರ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಮತ್ತು ವಾಹನ ಸವಾರರು ಪರದಾಡಿದರು. ಬೆಳೆಗಳು ಒಣಗುತ್ತಿದ್ದು, ಏಪ್ರಿಲ್ 20ರವರೆಗೆ ಕಾಲುವೆಗೆ ನೀರು ಹರಿಸಬೇಕೆಂದು ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಸುಮಾರು 1.20 ಲಕ್ಷ ಎಕರೆ ಪ್ರದೇಶದಲ್ಲಿ ರೈತರು ಬೆಳೆದ ಬೆಳೆಗಳು ಭತ್ತ, ಮೇಣಸಿನಕಾಯಿ, ಶೇಂಗಾ, ಸಜ್ಜೆ, ಇನ್ನಿತರ ಬೆಳೆಗಳು (ಸ್ಟಾಡಿಂಗ್ ಕ್ರಾಫ್ಟ್) ಇವೆ ಈ ಬೆಳೆಗಳು ಕಟಾವಿಗೆ ಬರಲು ಇನ್ನೂ ಒಂದುವರೆ ತಿಂಗಳು ಸಮಯ ಬೇಕಾಗಿದ್ದು ಕಾರಣ 20 ಏಪ್ರೀಲ್ ರವರೆಗೆ ಕಾಲುವೆ ನೀರು ಹರಿಸುವ ಅನಿವಾರ್ಯತೆ ಇದೆ. ಒಂದು ವೇಳೆ ನೀರಾವರಿ ಸಲಹಾ ಸಮಿತಿಯ ತೀರ್ಮಾನದಂತೆ ಮಾರ್ಚ್ 23 ನೀರು ಸ್ಥಗಿತ ಮಾಡಿದಲ್ಲಿ ಪ್ರಸ್ತುತ ರೈತರು ಬೆಳೆದ ಬೆಳೆಗಳು ಸಾವಿರಾರು ಕೋಟಿಯ ರೂಪಾಯಿ ನಷ್ಟವಾಗಿ ರೈತರು ಸಾಲದ ಸುಳಿಗೆ ಗುರಿಯಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ನೀರಾವರಿ ವ್ಯಾಪ್ತಿಯಲ್ಲಿರುವ ಸ್ಟಾಡಿಂಗ್ ಕ್ರಾಪ್ಸ್ ಬೆಳೆಗಳನ್ನು ರಕ್ಷಣೆ ಮಾಡುವುದು ಸರ್ಕಾರ ಹಾಗೂ ನೀರಾವರಿ ಇಲಾಖೆಯ ತುರ್ತು ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ ಎರಡನೇ ಬೆಳೆಯೂ ನೀರಿನ ಸಮಸ್ಯೆಯಿಂದ ಬೆಳೆ ಕೈ ಕೊಟ್ಟರೆ ರೈತರಿಗೆ ಉಳಿಗಾಲವಿಲ್ಲ ರೈತರ ಬೆಳೆಗಳನ್ನು ರಕ್ಷಿಸಲು ಏಪ್ರಿಲ್ ವರೆಗೆ ಕಾಲುವೆ ನಿರಂತರ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಚನ್ನಪ್ಪ ಆನೆಗುಂದಿ. ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ. ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ಜಿ ವೀರೇಶ. ನೀರು ಬಳಕೆದಾರರ ಸಂಘದ ಅಧ್ಯಕ್ಷ ಬಸವರಾಜ ನರೆಗಲ್. ಕಾರ್ಯದರ್ಶಿ ಸಿದ್ದಪ್ಪ ಗುಮೇದಾರ. ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮಂತ ಗುರಿಕಾರ. ಮೌನೇಶ್ ದಾಸರ. ಶಬ್ಬೀರ್ ಜಾಲಹಳ್ಳಿ. ಸಂಜೀವ ರೆಡ್ಡಿ. ಚಂದಪ್ಪ ಬುದ್ದೀನಿ. ಮತ್ತು ಸಾವಿರಾರು ಜನ ರೈತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News