ರಾಯಚೂರು: ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ (ಬಿಇಒ) ರಾಧಾದೇವಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಸಂಜೆ ಆದೇಶ ಹೊರಡಿಸಿದೆ.

ರಾಧಾದೇವಿ ಅವರು ಈ ಹಿಂದೆ ದೇವದುರ್ಗ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಯಚೂರಿನ ಬಿಇಒ ಆಗಿದ್ದ ಈರಣ್ಣ ಕೋಸಗಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ರಾಧಾದೇವಿ ಅವರನ್ನು ನೇಮಕ ಮಾಡಲಾಗಿದೆ.

ಈರಣ್ಣ ಕೋಸಗಿ ಅವರನ್ನು ಯರಮರಸ್‌ನ ಡಯಟ್ ಸಂಸ್ಥೆಯ ಉಪನ್ಯಾಸಕರ ಖಾಲಿ ಹುದ್ದೆಗೆ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬವಸಾಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ